ಕದನ ವಿರಾಮ- ಕೇಂದ್ರ ತಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ- ಸಿಎಂ

Share

ಮೈಸೂರು, ಮೇ,12- ಭಾರತ- ಪಾಕಿಸ್ತಾನ ನಡುವೆ ನಡೆಯುವ ಕದನ ವಿರಾಮ ಕುರಿತಂತೆ ತಗೆದುಕೊಳ್ಲುವ ಯಾಬುದೇ ತೀರ್ಮಾನಕ್ಕೂ ನಾವು ಬದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎರಡು ದೇಶಗಳ ಡಿಜಿಎಂಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡುತ್ತಾರೆ ಮಾಡಲಿ. ಕೇಂದ್ರದ ತೀರ್ಮಾನಕ್ಕೆ ನಾವು ಬದ್ದ ಎಂದಿದ್ದಾರೆ.

ಕದನ ವಿರಾಮ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ , ಆ ಬಗ್ಗೆ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಘೋಷಣೆ ಆಗಿದೆ . ಅದನ್ನು ಸ್ವಾಗತ ಮಾಡಿದ್ದೇನೆ. ಯುದ್ದದ ಬಗ್ಗೆ ನಾನೇನೂ ಮಾತನಾಡಲ್ಲ ಎಂದರು.

ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು.ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದರು.

Girl in a jacket
error: Content is protected !!