ಬೆಂಗಳೂರು, ಮೇ,21:ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 52,581 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ,353 ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,32,218 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 23,67,742 ಕ್ಕೆ ಏರಿಕೆಯಾಗಿದೆ. ಆ ಪೈಕಿ 24,207 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,29,276 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,14,238 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 9,591 ಹೊಸ ಪ್ರಕರಣಗಳು ವರದಿಯಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 2,355, ಹಾಸನ 2,071, ತುಮಕೂರು 1,773, ಬಳ್ಳಾರಿ 1,650 ಬೆಳಗಾವಿ 1,138, ಶಿವಮೊಗ್ಗ 892, ದಕ್ಷಿಣ ಕನ್ನಡ 864, ಚಿಕ್ಕಬಳ್ಳಪುರ 845, ಚಿತ್ರದುರ್ಗ ಜಿಲ್ಲೆಯಲ್ಲಿ 838 ಹೊಸ ಪ್ರಕರಣಗಳು ಪತ್ತೆಯಾಗಿವೆ.