ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

Share

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

by-ಕೆಂಧೂಳಿ

ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ.

ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್‌ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್‌ ಅವರಿಗೆ ಮದುವೆಯಾಗಿ ಮಗು ಇದ್ದು ಕುಟುಂಬ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಾಗಿದ್ದರು.

ಇದೇ ವಿಷಯವನ್ನಿಟ್ಟುಕೊಂಡು ಬಿಜೆಪಿ ಬೃಹತ್ ಪ್ರತಿಭಟನೆ ಮಾಡುವ ಸಾಧ್ಯತೆಗಳಿವೆ.

Girl in a jacket
error: Content is protected !!