ಕೃಷ್ಣಮೇಲ್ದಂಡೆ ಯೋಜನೆ ಹಿನ್ನೀರು ಮುಳುಗಡೆ ಜಮೀನು ಮಾರ್ಗಸೂಚಿ ಪರಷ್ಕರಿಸಲು ಮನವಿ

Share

ಬೆಂಗಳೂರು,ಸೆ, 20:ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ 524.256ಮೀ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ ತಾಲೂಕಿನ ಜಮೀನಿನ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಣೆ ಮಾಡಬೇಕು ಎಂದು ಬಬಲೇಶ್ವರ ತಾಲೂಕಿನ ರೈತರ ನಿಯೋಗ ಇಂದು ಕಂದಾಯ ಸಚಿವ ಆರ್.ಅಶೋಕ ಅವರಿಗೆ ಮನವಿ ಸಲ್ಲಿಸಿದರು.

ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದ್ದು, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡುವಂತೆ ಕಂದಾಯ ಸಚಿವರಿಗೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ರವರು ಮಾರ್ಗಸೂಚಿಯ ಬೆಲೆ ಮತ್ತು ಮುಳುಗಡೆಯಾಗಲಿರುವ ಭೂಪ್ರದೇಶಗಳ ವಿವರಗಳನ್ನು ಕಂದಾಯ ಸಚಿವರಿಗೆ ತಿಳಿಸಿ, ಈ ರೈತರ ಬೇಡಿಕೆ ನ್ಯಾಯಯುತವಾಗಿದ್ದು, ಮುಳುಗಡೆಯಾಗುವ ಇತರೆ ತಾಲೂಕುಗಳಿಗೆ ತಾರತಮ್ಯವಾಗದಂತೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೋರಿದರು.

ಮನವಿ ಸ್ವೀಕರಿಸಿದ ಕಂದಾಯ ಸಚಿವ ಆರ್.ಅಶೋಕ ಅವರು ಸಂತ್ರಸ್ಥರ ಮನವಿಯನ್ನು ಸರ್ಕಾರ ಕೂಲಕುಂಷವಾಗಿ ಪರಿಶೀಲನೆ ಮಾಡಿ ರೈತರಿಗೆ ಅನಕೂಲವಾಗುವಂತೆ ಕ್ರಮಜರುಗಿಸುವುದಾಗಿ ಭರವಸೆ ನೀಡಿದರು.

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಮಾಜಿ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಎಚ್.ಎಸ್.ಕೋರಡ್ಡಿ, ರಾಜ್ಯ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷ ರಾಜೇಂದ್ರ ದೇಸಾಯಿ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಸಿದ್ದಣ್ಣ ದೇಸಾಯಿ, ರಾಮಣ್ಣ ಶೇಬಾನಿ, ವೆಂಕಣ್ಣ ಬಿದರಿ ಹಾಗೂ ಮುಖಂಡರಾದ ಪ್ರಭುಸ್ವಾಮಿ ಹಿರೇಮಠ, ಡಾ.ಎಂ.ಎಚ್.ಪಾಟೀಲ ಸೇರಿದಂತೆ ಜೈನಾಪುರ, ದೇವರಗೆಣ್ಣೂರ, ಶಿರಬೂರ, ಹೊಸೂರ, ಜಂಬಗಿ, ಕಣಬೂರ, ಲಿಂಗದಳ್ಳಿ ಹಾಗೂ ಇತರೆ ಗ್ರಾಮಸ್ಥರು ಉಪಸ್ಥಿತರಿದ್ದರು.

Girl in a jacket
error: Content is protected !!