ಚಾಮರಾಜನಗರದಲ್ಲಿ ೨೪ ಮಂದಿ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ

Share

ಬೆಂಗಳೂರು,ಮೇ೧೩: ಚಾಮರಾಜ ನಗರದಲ್ಲಿ ಮೇ ೨ ರ ರಾತ್ರಿ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ನೀಡಿದೆ.
ಮೇ ೨ ರ ಮಧ್ಯೆ ರಾತ್ರಿ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೨೪ ಮಂದಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದರು ಆದರೆ ಅದು ಆಮ್ಲಜನಕದ ಕೊರತೆಯಿಮದಲ್ಲ ಕೇವಲ ೪ ಮಂದಿ ಮಾತ್ರ ಆಮ್ಲಜನಕ ಕೊರತೆಯಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು.
ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು ಪ್ರತಿಪಕ್ಷಗಳು ಈ ಬಗ್ಗೆ ದಾಖಲೆಗಳ ಸಮೇತ ಆಮ್ಲಜನಕ ಕೊರತೆಯಿಂದಲೇ ಸಾವನ್ನಪ್ಪಿದ್ದರು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಗೌಡ ನೇತೃತ್ವದ ಮೂವರು ನೇತೃತ್ವದ ಸಸಮಿಯನ್ನು ನೇಮಕಮಾಡಿತ್ತು.

ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ ೨ ರ ಮಧ್ಯರಾತ್ರಿ ಸಂಭವಿಸಿದ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ. ಈ ಸಮಿತಿ ಸಾವನ್ನಪ್ಪಿದ ೨೪ ಮಂದಿಯೂ ಆಮ್ಲಜನಕದ ಕೊರತೆಯಿಂದಲೇ ಸಾವನ್ನಪ್ಪಿದೆ ಎಂದು ವರದಿಯಲ್ಲಿ ತಿಳಿಸಿದೆ ಅಲ್ಲದೆ ಮೃತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಶಿಪಾರಸು ಮಾಡಿದೆ

ಈ ಸಮತಿ ವರದಿಯಲ್ಲಿ, ಆಸ್ಪತ್ರೆಯ ಆಡಳಿತ ಮಂಡಳಿ ಜಾಗರೂಕವಾಗಿದಿದ್ದರೇ ಸಮಯೋಚಿತವಾಗಿ ಆಮ್ಲಜನಕ ಸಿಲಿಂಡರ್ ಪೂರೈಸಿದ್ದರೇ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇರಲಿಲ್ಲ ಎಂದು ತಿಳಿಸಿದೆ.
‘ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಆಸ್ಪತ್ರೆಯ ಆಡಳಿತ ಜಾಗರೂಕರಾಗಿದ್ದರೆ, ಪೂರೈಕೆದಾರರು ಸಮಯೋಚಿತವಾಗಿ ಮರುಪೂರಣಗೊಳಿಸಿದ್ದರೆ ಸಾಕಷ್ಟು ಆಮ್ಲಜನಕ ಸಂಗ್ರಹಿಸಬಹುದಿತ್ತು. ಅದನ್ನು ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣವಾಗಿದೆ’ ಎಂದು ವರದಿ ಹೇಳಿದೆ.

‘ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ. ಚಾಮರಾಜನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ’ ಎಂದು ವರದಿ ಹೇಳಿದೆ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

Girl in a jacket
error: Content is protected !!