ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Share

 

ಹುಬ್ಬಳ್ಳಿ ,ಜು, 29:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು.

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ ,ಶಾಸಕ ಶಿವರಾಮ್ ಹೆಬ್ಬಾರ , ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಸೇರಿದಂತೆ ,ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು,ಅಭಿಮಾನಿಗಳು ನೆರೆದಿದ್ದರು.

Girl in a jacket
error: Content is protected !!