ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

Share

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

by ಕೆಂಧೂಳಿ

ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳಿಸಲು ನಮ್ಮ ಯುವ ಸಮುದಾಯ ಜೊತೆಯಾಗಬೇಕೆಂಬ ಮನವಿ ಮಾಡಿದರು.
ದೇಶವು ಬಹಳ ವರ್ಷಗಳಿಂದ ಎದುರಿಸುತ್ತಿದ್ದ ಜ್ವಲಂತ ಸಮಸ್ಯೆಗಳಿಗೆ ಸಮರ್ಥ ನಾಯಕತ್ವದಿಂದಾಗಿ ಪರಿಹಾರಗಳು ದೊರೆಯುತ್ತಿವೆ. ಜಾಗತಿಕ ಮಟ್ಟದಲ್ಲಿ ‘ನಂಬರ್ 1’ ಸ್ಥಾನವನ್ನು ಪಡೆಯುವ ಮೂಲಕ ಸಾಗುತ್ತಿರುವ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ವಿಶ್ಲೇಷಿಸಿದರು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ತಾಲ್ಲೂಕು ದಂಡಾಧಿಕಾರಿ ಮಲ್ಲೇಶ್ ಬೀರಪ್ಪ ಪೂಜಾರ್, ಪುರಸಭಾ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಯೋಗೀಶ್ ಮಡ್ಡಿ, ಉಪಾಧ್ಯಕ್ಷರಾದ ಶ್ರೀಮತಿ ರೂಪಾ ಮಂಜುನಾಥ್, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Girl in a jacket
error: Content is protected !!