ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

Share

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

by-ಕೆಂಧೂಳಿ

ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದು ತಿಳಿಸಿದರು.

ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಮಾನ್ಯ ಉಪಾಧ್ಯಕ್ಷರು ಮಾತನಾಡಿ, ಪ್ರತಿಯೊಬ್ಬ ಯಶಸ್ಸಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ಧಿ ಹೊಂದುತ್ತಿರುವುದು ಸ್ವಾಗತಾರ್ಹ ಎಂದು ಎಲ್ಲಾ ಪ್ರತಿಭಾ ಪುರಸ್ಕೃತ 42 ಮಹಿಳಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ನುಕುಮಾರ್ ಅವರು ಮಾತನಾಡಿ, ನಿಗಮಕ್ಕೆ ಶಕ್ತಿಯಾಗಿರುವ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಅಭಿನಂದಿಸಿದರು. ನಮ್ಮ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾರ್ಗದರ್ಶನವಾಗಿದೆ. ಶಿಕ್ಷಣವೇ ಶಕ್ತಿ, ಪ್ರತಿಯೊಬ್ಬ ಮಹಿಳೆಯರು ಶಿಕ್ಷಣ ಪಡೆಯಬೇಕು. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಭ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯಲು ಸಾಧನವಾಗಿದೆ ಎಂದು ತಿಳಿಸಿದರು.

ಇಂದು ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-16, ಹಾಗೂ ಕರಾಸಾ ಪೇದೆ-7, ಒಟ್ಟು 42 ಮಹಿಳಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌಳ

ಇದೇ ಸಂದರ್ಭದಲ್ಲಿ ಮಹಿಳಾ ತಾಂತ್ರಿಕ ಸಿಬ್ಬಂದಿಗಳೇ ಹೆಚ್ಚಿನ ಸಂಖ್ಯೆ ಕಾರ್ಯನಿರ್ವಹಿಸಿರುವ ನಗರ ಸಾರಿಗೆ ಬಸ್ಸುಗಳ ಪುನಶ್ಚತನದ ವಿಡಿಯೋ ವನ್ನು ಬಿಡುಗಡೆ ಮಾಡಲಾಯಿತು

ಕಾರ್ಯಕ್ರಮಕ್ಕೆ ಆಹ್ವಾನಿಸಿದ ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಶ್ರೀಮತಿ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಹಾಡು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಗೌರವ ಧನ ನೀಡಿ ಸನ್ಮಾನಿಸಲಾಯಿತು

Girl in a jacket
error: Content is protected !!