ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ರಾಜೇಶ್ವರಿ

Share

ಬೆಂಗಳೂರು ಜುಲೈ 24: ಕರೋನಾ ಸಾಂಕ್ರಾಮಿಕದ ಲಾಕ್‌ಡೌನ್‌ ನಿಂದ ತೀವ್ರ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ನಟಿ ರಾಜೇಶ್ವರಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ  ಆಯೋಜಿಸಲಾಗಿರುವ ಇಂಡಿಯನ್‌ ಆರ್ಟಿಸನ್ಸ್‌ ಬಜಾರ್‌ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಎರಡನೇ ಅಲೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದು ಕರಕುಶಲಕರ್ಮಿಗಳು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಗಾಗ್ಗೆ ಆಯೋಜಿಸಲಾಗುತ್ತಿದ್ದ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಬಹಳಷ್ಟು ಕರಕುಶಲಕರ್ಮಿಗಳಿಗೆ ಅಗತ್ಯ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಒದಗಿಸುತ್ತಿತ್ತು.

ಲಾಕ್‌ಡೌನ್‌ ಹಿನ್ನಲೆಯಲ್ಲಿ ಈ ವ್ಯವಸ್ಥೆಯೂ ಇಲ್ಲದೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ತೊಂದರೆಪಡುತ್ತಿದ್ದ ಕರಕುಶಲಕರ್ಮಿಗಳ ಅನುಕೂಲಕ್ಕಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ 10 ದಿನಗಳ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತೊಂದರೆಯಲ್ಲಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಿದೆ ಎಂದು ಹೇಳಿದರು.

ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ದೇಶದ ಎಲ್ಲಾ ಭಾಗಗಳಿಂದಲೂ ಆಗಮಿಸಲಿರುವ ಕರಕುಶಲ ಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ. ಕಾಶ್ಮೀರಿ ಸೀರೆಗಳು ಮತ್ತು ಶಾಲುಗಳು, ಮಣಿಪುರಿ, ಆಂಧ್ರಪ್ರದೇಶ, ತಮಿಳುನಾಡಿನ ಪ್ರಸಿದ್ದ ರೇಷ್ಮೇ ಸೀರೆಗಳು ಹಾಗೂ ಈಶಾನ್ಯ ರಾಜ್ಯಗಳ ಕಲಾಕಾರರು ತಯಾರಿಸಿರುವ ಉತ್ಪನ್ನಗಳು ಎಲ್ಲರ ಗಮನ ಸೆಳೆಯುತ್ತಿವೆ ಎಂದು ನಟಿ ಐಶಾನ ಸಣ್ಣಪ್ಪನವರ್‌ ಹೇಳಿದರು.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬಾರಿ ಕೇವಲ 60 ಅಂಗಡಿಗಳನ್ನು ನಿರ್ಮಿಸಲಾಗಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಟ್ಟಿದ್ದಾರೆ.

Girl in a jacket
error: Content is protected !!