ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

Share

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು, ಈ ಪ್ರಕರಣ ದೆಹಲಿಯಲ್ಲಿ ಇತ್ಯರ್ಥವಾಗುವುದಿಲ್ಲ. ಸುಪ್ರೀಂ ಕೋರ್ಟ್​ನಲ್ಲಿ ಈ ಪ್ರಕರಣ ನಡೆಯುತ್ತಿದೆ. ನ್ಯಾಷನಲ್​ ಎನ್​ಜಿಟಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಅಂತರರಾಜ್ಯ ನದಿ ವಿವಾದ ಹಿನ್ನಲೆ ಇದನ್ನು ಮೂರು ಸದಸ್ಯರ ಸಮಿತಿ ಈ ಕುರಿತು ತೀರ್ಮಾನ ಮಾಡಲಿದೆ. ಈ ಬಗ್ಗೆ ನಿನ್ನೆ ಕೂಡ ವಾದ ವಿವಾದ ನಡೆದಿದೆ. ನಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಈ ಹಿನ್ನಲೆ ನಮಗೆ ಗೆಲ್ಲುವ ವಿಶ್ವಾಸ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.
ರಾಜ್ಯದ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ. ಮೇಕೆದಾಟು ಇರಬಹುದು, ಮಹಾದಾಯಿ ಇರಬಹುದು. ನಮ್ಮ ನೆಲ , ಜಲದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ನಾವು ಅತ್ಯಂತ ಬದ್ದವಾಗಿದ್ದೇವೆ ಎಂದರು

ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಈ ಸಂಬಂಧ ತೀರ್ಪು ಕಾಯ್ದಿರಿಸಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಈಗಾಗಲೇ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಬಾಕಿ ಇದೆ. ಹಾಗಾಗಿ ಎನ್​ಜಿಟಿ ದಕ್ಷಿಣ ಪೀಠ ಸ್ವಯಂ ಪ್ರೇರಣೆಯ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿದೆ.

Girl in a jacket
error: Content is protected !!