ಬೆಂಗಳೂರು, ಮೇ ೨೪: ಇನ್ನೂ ಮುಂದೆ ರಾಜ್ಯದ ಎಲ್ಲಾ ಕಡೆಯೂ ಕೊರೊನಾ ಸೋಂಕಿತರ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕಂದಾಯಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್,ಅಶೋಕ್ ಅವರು ತಿಳಿಸಿದ್ದಾರೆ.
ಈ ಮೂಲಕ ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ ಕೂಡ ಪ್ರತಿ ಮನೆಗಳಿಗೂ ತೆರಳಿ ವಿಶೇಷ ತಂಡ ಕೊರೊನಾ ಸೋಂಕಿತರನ್ನು ಗುರುತಿಸಲಾಗುತ್ತದೆ ಈ ಕುರಿತಂತೆ ಕಂದಾಯ ಇಲಾಖೆ ಪ್ರದಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಅವರು ಹೇಳಿದರು.
ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದರೂ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಹಾಗಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ ಎಂದ ಅವರು ಹೇಳಿದರು
ಕೊರೊನಾ ೩ನೇ ಅಲೆ ಭೀತಿ; ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಆಸ್ಪತ್ರೆ ಹೆಚ್ಚಳ ಅದೇ ರೀತಿ ಗ್ರಾಮೀಣ ಜನರು ಕೂಡಾ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹಾಗೆಯೇ ಪರೀಕ್ಷಾ ಕೇಂದ್ರಗಳ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಹೀಗಾಗಿ ವೈದ್ಯರು, ಎಎನ್‌ಎಮ್‌ಗಳು, ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಪರೀಕ್ಷೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಬಜಾಜ್ ಫೈನಾನ್ಸ್ ನಿಶ್ಚಿತ ಠೇವಣಿ ಮೇಲೆ ಹೂಡಿಕೆ ಮಾಡಿ ಮತ್ತು ಶೇ. ೭.೨೫ ರಷ್ಟು ಮರಳಿ ಪಡೆಯಿರಿ. “ಈಗಾಗಲೇ ಮೊಬೈಲ್ ಕ್ಲಿನಿಕ್ ಗ್ರಾಮಗಳಿಗೆ ಭೇಟಿ ನೀಡಿದ್ದು, ಅಂತಿಮ ವರ್ಷದಲ್ಲಿರುವ ವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿಡಿಎಸ್ ವಿದ್ಯಾರ್ಥಿಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.
ರಾಜ್ಯದೆಲ್ಲಡೆ ಮನೆ-ಮನೆಗೂ ತೆರಳಿ ಕೊರೊನಾ ಸೋಂಕು ಪರೀಕ್ಷೆ-ಅಶೋಕ್
Share