ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

Share

ಬೆಂಗಳೂರು,10; ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ.
ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು.

ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಇಲ್ಲೇ ಬಳಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಬೇಕು. ಆಕ್ಸಿಜನ್ ಸಿಲಿಂಡರ್ ಮಾರಾಟ ದಂಧೆಗೆ ಕಡಿವಾಣ ಹಾಕಿ ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಆಕ್ಸಿಜನ್ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Girl in a jacket
error: Content is protected !!