ಬೆಂಗಳೂರು, ಜೂ, ೦೧: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ಸೋಮವಾರ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಕೂಡ ಮಾಡಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈದ್ಯ ಡಾ. ರವಿ ಕುಮಾರ್ ಅವರು ಆರೋಗ್ಯ ತಪಾಸಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ, ಆದರೂ ಜ್ವರ ಇರುವ ಕಾರಣ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.ವೈದ್ಯರ ಸಲಹೆ ಮೇರೆಗೆ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಿಗದಿಪಡಿಸಲಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ರದ್ದುಪಡಿಸಿದ್ದಾರೆ.
ಇನ್ನು ತಮ್ಮ ನಿವಾಸದಲ್ಲಿಯೂ ಸಹ ಯಾರನ್ನೂ ಭೇಟಿ ಮಾಡದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಿದ್ದರಾಮಯ್ಯಗೆ ಜ್ವರ-ಮೂರು ದಿನ ವಿಶ್ರಾಂತಿ
Share