ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು
ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು ಕೊಳಚೆ ನೀರಿನಲ್ಲಿ ವಾಸ ಮಾಡುತ್ತಿದ್ದು ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಕೊಳಚೆ ಆಗದಂತೆ ಎಚ್ಚರ ವಹಿಸಿ ಮಲೇರಿಯಾ ರೋಗದಿಂದ ದೂರವಿರಲು ಕರೆ ನೀಡಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಡಾ. ಜೋಶಿ ಸಹ ಪ್ರಾಧ್ಯಾಪಕ ಡಾ.ಪಟ್ಟಣ್ ರಾಕೇಶ್ ರೆಡ್ ಕ್ರಾಸ್ ಸಂಚಾಲಕ ಡಾ.ಪಾಂಡುರಂಗ ಆರೋಗ್ಯ ನಿರೀಕ್ಷಣಾಧಿಕಾರಿ ತಾಜ್ ಪೀರ್ ಖಾನ , ಜ್ಯೋತಿ ಕಿರಣ್ ,ವೀರೇಶ್ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ ತಪಾಸಣೆ ಮತ್ತು ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು ಅದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.
ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ
Share