ಮೈಸೂರು,ಜೂ,೦೫: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಕಾರ್ಯದರ್ಶಿ ಈ ಕುರಿತು ಸೋಮವಾರ ನಿರ್ಧಾರ ಮಾಡುವ ಸಾಧ್ಯತೆಗಳಿವೆ
ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿರುವ ಶಿಲ್ಪಾ ಅವರು ರಾಜೀನಾಮೆ ಸಲ್ಲಿಸಿದ್ದರು ಈ ಕುರಿತು ನಿನ್ನೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಚರ್ಚಿಸಿದ್ದರು.
ಈ ವೇಳೆ ಶಿಲ್ಪಾ ನೀಡಿದ ರಾಜೀನಾಮೆಯನ್ನು ಪಡೆದಿದ್ದ ರವಿಕುಮಾರ್ ವರು ಮುಖ್ಯಮಂತ್ರಿ ಅವರಿಗೆ ಈ ಇಬ್ಬರು ಅಧಿಕಾರಿಗಳ ಕುರಿತು ವರದಿ ಸಲ್ಲಿಸಿ ಆ ನಂತರ
ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಮರ ಮುಂದುವರಿದಿದೆ. ರೋಹಿಣಿ ಸಿಂಧೂರಿ ಆರೋಪಕ್ಕೆ ಶಿಲ್ಪಾನಾಗ್ ತಿರುಗೇಟು ನೀಡಿದ್ದು, ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲವು ಸಭೆಗಳಿಗೆ ಹೋಗಿದ್ದೇನೆ. ನನಗೆ ಬೇರೆ ಪಾಲಿಕೆ ಕೆಲಸವಿದ್ದಾಗ ನನ್ನ ಪರವಾಗಿ ಅಧಿಕಾರಿಯನ್ನು ಕಳುಹಿಸಿದ್ದೇನೆ. ೯ ಕಡೆ ಕೊವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ೧,೧೨೨ ಹಾಸಿಗೆ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾಡಳಿತದ ವಿರುದ್ಧ ಯಾವುದೇ ರೀತಿ ಹೇಳಿಕೆ ನೀಡಿಲ್ಲ ಎಂದು ಪತ್ರಿಕಾ ಪ್ರಕಟಣೆ ಮೂಲಕ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಸ್ಪಷ್ಟಪಡಿಸಿದ್ದಾರೆ
ಮುಖ್ಯಮಂತ್ರಿಗೆ ಯಡಿಯೂರಪ್ಪಗೆ ಸಿಎಸ್ ವರದಿಯನ್ನು ನೀಡಲಿದ್ದಾರೆ. ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸುತ್ತಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.