ಹೂವಿನ ಹಡಗಲಿ,ಜೂ,22: ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನಜಾವ ನಿಧನರಾದರು.
31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.
ಮಾಲತೇಶಪ್ಪ ನಿಧನಕ್ಕೆ ನಾಡಿನ ಹಲವಾರು ಮಠಾಧೀಶರು,ಸ್ವಾಮೀಜಿಗಳು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.