ಮಂಗಳೂರು,ಮೇ,೦೩-ರಾಜ್ಯದಲ್ಲಿ ಕೋಮುಗಲಭೆಯನ್ನು ಹತ್ತಿಕ್ಕಲು ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸುಹಾಸ್‌ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು ವರ್ಷಗಳೀಂದ ಕೋಮುಗಲಭೆಯಾಗುತ್ತಿವೆ ಈ ಹಿನ್ನೆಲೆಯಲ್ಲಿ ಇನ್ನುವುಂದೆ ಇಂತ ಘಟನೆಗಳು ಸಂಭವಿಸದಂತೆ ಕೋಮುಗಲಭೆ ನಿಗ್ರಹ ಪಡೆಯನ್ನು ರಚಿಸುತ್ತೇವೆ ಎಂದರು.
ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿದೆ. ಸುಹಾಸ್ ಕೊಲೆಯಲ್ಲಿ ೮ ಜನ, ಅಶ್ರಫ್ ಕೊಲೆಯಲ್ಲಿ ೨೧ ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಯಾರನ್ನೂ ಕಾನೂನು ಉಲ್ಲಂಘನೆ ಮಾಡಲು ಬಿಡೋದಿಲ್ಲ ಎಂದು ಹೇಳಿದರು.
ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು. ಹಿಂದೆ ಈ ಜಿಲ್ಲೆಯಲ್ಲೂ ಶಾಂತಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದು ನಾವು ಹೊಸದಾಗಿ ಒಂದು ಆಟಿ ಕಮ್ಯುನಲ್ ಫೋರ್ಸ್ನ್ನು ಪ್ರತ್ಯೇಕವಾಗಿ ಮಾಡ್ತೇವೆ. ಆಂಟಿ ನಕ್ಸಲ್ ಫೋರ್ಸ್ನಂತೆ ಪ್ರತ್ಯೇಕವಾಗಿ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡುತ್ತೆ ಎಂದು ಮಾಹಿತಿ ನೀಡಿದರು.
ಯಾರು ಕೋಮುವಾದದ ಕೆಲಸ ಹಾಗೂ ಹಿಂದಿನಿಂದ ಯಾರು ಕೆಲಸ ಮಾಡ್ತಾರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಈ ಫೋರ್ಸ್ಗೆ ಸಂಪೂರ್ಣ ಅನುಮತಿ ನೀಡ್ತೇವೆ. ಈ ಎರಡು ಜಿಲ್ಲೆಗಳಲ್ಲಿ ಈ ಫೋರ್ಸ್ ಕೆಲಸ ಮಾಡ್ತದೆ. ಯಾರು ಈ ಜಿಲ್ಲೆಯಲ್ಲಿ ಕಮ್ಯುನಲ್ ಭಾಷಣ ಮಾಡ್ತಾರೋ ಅವರ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಾಂತಿಯಿಂದ ಇರಬೇಕು. ಜನರೂ ಇಲ್ಲಿಗೆ ಬರಬೇಕು. ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡ್ತೇವೆ. ಎರಡು ಜಿಲ್ಲೆಯಲ್ಲಿ ಮಾತ್ರ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡ್ತದೆ. ಐಜಿಪಿ ನೇತೃತ್ವದಲ್ಲಿ ಕೆಲಸ ಮಾಡ್ತದೆ ಎಂದು ಸ್ಪಷ್ಟಪಡಿಸಿದರು.
ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಯಾವುದೇ
ಧರ್ಮದವರಾಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ಕ್ರಮಕೈಗೊಳ್ತೇವೆ. ೮ ಆರೋಪಿಗಳು ಏನು ಹೇಳಿಕೆ ನೀಡ್ತಾರೋ ಆಗ ಕೊಲೆಯ ಕಾರಣ ಗೊತ್ತಾಗುತ್ತದೆ ಎಂದರು.