ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

Share

ಬೆಂಗಳೂರು, ಮೇ,01-ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ಎಲ್ಲಾ ಶಾಲೆಗಳಲ್ಲೂ ಮಧ್ಯಾಹ್ನದ ನಂತರ ಪ್ರಕಟಿಸಲಿದೆ.

ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಹೆಚ್.ಬಸವರಾಜೇಂದ್ರ ಅವರು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ 12.30ರ ಬಳಿಕ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

Girl in a jacket
error: Content is protected !!