ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ: ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಕ್ರಮ: ಸಿ.ಎಂ

Share

ಹುಬ್ಬಳ್ಳಿ ,ಅ,17: ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಆರ್ಥಿಕತೆಯನ್ನು ಅವಲಂಬಿಸಿದ್ದು, ಉಪ ಚುನಾವಣೆ ನಂತರ ಆರ್ಥಿಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದ್ದರೆ, ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆಗೆ ಅವಕಾಶಗಳಿವೆ ಎಂದರು.

Girl in a jacket
error: Content is protected !!