ಬೆಂಗಳೂರು, ಜೂ,04:ಕನ್ನಡದ ಹಿರಿಯ ಬರಹಗಾರ, ಕವಿ,ಪ್ರೊ. ವಸಂತ ಕುಷ್ಟಗಿ ಅವರು ಇಂದು ನಿಧನರಾಗಿದ್ದಾರೆ.
ಕನ್ನಡ ಪುಸ್ತಕಲೋಕಕ್ಕೆ ತಮ್ಮ ಅನನ್ಯ ಕಾವ್ಯ ಪ್ರತಿಭೆಯಿಂದ ಮಹತ್ವದ ಕೊಡುಗೆ ಕೊಟ್ಟ ಲೇಖಕರಲ್ಲಿ ಪ್ರೊಫೆಸರ್ ವಸಂತ ಕುಷ್ಟಗಿ ಅವರೂ ಒಬ್ಬರು.
ಕಲ್ಬುರ್ಗಿ ಮೂಲದ ವಸಂತ ಕುಷ್ಟಗಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಎಂ. ಎ. ಪದವಿ ಪಡೆದ ನಂತರ ಬೀದರ್ ನ ಭೂಮಿ ರೆಡ್ಡಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.
ಆನಂತರ ವಿವಿಧ ಕಾಲೇಜುಗಳಲ್ಲಿ ಅನೇಕ ಹಂತದ ಹುದ್ದೆಗಳನ್ನು ನಿರ್ವಹಿಸಿ, ಪ್ರಾಂಶುಪಾಲರಾಗಿ ನಿವೃತ್ತರಾದರು.
ರಮನಂದ ತೀರ್ಥ ಸಂಶೋಧನಾ ಸಂಸ್ಥೆಯ ಗೌರವ ನಿರ್ದೇಶಕ ರಾಗಿಯೂ ಸೇವೆ ಸಲ್ಲಿಸಿದ್ದರು.
ಅವರ ಭಕ್ತಿ ಗೋಪುರ, ಹೊಸ ಹೆಜ್ಜೆ, ಗಾಂಧಾರಿಯ ಕರುಣೆ, ಬೆತ್ತಲೆಯ ಬಾನು, ಚಂದ್ರಲಾ, ಮಾನ್ಯಖೇಟ ಮತ್ತು ಇತ್ತೀಚೆಗಿನ ಅಪ್ ಅಂಡ್ ಡೌನ್ ಋತುಚಕ್ರ ಮುಂತಾದ ಕೃತಿಗಳು ಬಹು ಜನಪ್ರಿಯ ವಾಗಿವೆ,
ಪ್ರತಿಷ್ಠಿತ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ,ಗೊರೂರು ರಾಮಸ್ವಾಮಿ ಅಯ್ಯಂಗಾರ್ ಪ್ರಶಸ್ತಿ, ಸರ್ ಎಂ ವಿ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಸಂತಾಪ;
ಪ್ರೊ ವಸಂತ ಕುಷ್ಟಗಿ ನಿಧನಕ್ಕೆ,ವಸಂತ ಕುಷ್ಟಗಿ ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕ ಒಬ್ಬ ಅತ್ಯುತ್ತಮ ಲೇಖಕನನ್ನು ಕಳೆದುಕೊಂಡಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ಅರವಿಂದ ಲಿಂಬಾವಳಿ,ಮುರುಗೇಶ್ ನಿರಾಣಿ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿದಿದ್ದಾರೆ.