ಭಾರತ್ ಬದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ

Share

ಬೆಂಗಳೂರು,ಸೆ,೨೭: ಕೇಂದ್ರಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಆದರೆ ಬೆಂಗಳೂರಿನಲ್ಲಿ ಎಂದಿನಂತೆ ಕೆ.ಆರ್ ಮಾರುಕಟ್ಟೆಯಲ್ಲಿ ಇತ್ತು ಮಾರುಕಟ್ಟೆಯ ವ್ಯವಹಾರದಲ್ಲಿಯಾವುದೇ ಏರು ಪೇರು ಆಗಲಿಲ್ಲ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿತ್ತು.
ಬಿಎಂಟಿಸಿ ಚಾಲಕರು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಮೆಟ್ರೋ, ಕ್ಯಾಬ್ ಗಳ ಸೇವೆ ಎಂದಿನಂತೆಯೇ ಇದ್ದರಿಂದ ಬೆಳಗಿನ ಜಾವ ಬಂದ್ ಬಿಸಿ ಅಷ್ಟಾಗಿ ಇನ್ನೂ ತಾಗಿಲ್ಲ. ಕೆ.ಆರ್. ಪುರ, ಯಶವಂತಪುರ ತರಕಾರಿ ಮಾರುಕಟ್ಟೆಗಳಲ್ಲಿ ಬೆಳಗಿನ ವ್ಯವಹಾರ ಎಂದಿನಂತಯೇ ನಡೆಯುತ್ತಿದೆ. ದಾವಣಗೆರೆಯಲ್ಲಿ ಬೆಳಗ್ಗೆ ೪ ಗಂಟೆಯಿಂದಲೇ ಪ್ರತಿಭಟನೆ ಆರಂಭವಾಗಿದೆ. ರೈತ ಮುಖಂಡರು ಮತ್ತು ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಸ್ ನಿಲ್ದಾಣಕ್ಕೆ ತೆರಳಿ ಬಸ್ ಸಂಚಾರಕ್ಕೆ ಅಡ್ಡಿ ಉಂಟು ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ರೈತ ಮುಖಂಡರು ನಗರದ ಆಟೋ ಚಾಲಕರು ಮತ್ತು ಬಸ್ ಚಾಲಕರಿಗೆ ಕೈಮುಗಿದು ಬಂದ್ ಗೆ ಬೆಂಬಲ ವ್ಯಕ್ತಪಡಿಸುವಂತೆ ಕೋರಿದ್ದಾರೆ. ಇದಕ್ಕೂ ಮುನ್ನ ಜಯದೇವ ವೃತ್ತದ ಬಳಿ ತರಕಾರಿ ರಸ್ತೆಗೆ ಸುರಿದು ಕೆಲ ಯುವ ರೈತರು ಪ್ರತಿಭಟನೆ ನಡೆಸಿದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಒದಗಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಕೃಷಿ ಕಾಯ್ದೆಗಳಿಂದ ತಮ್ಮ ಜೀವನ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಲಿದೆ ಎಂದು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯ ಬಿಸಿ ತೋರಿಸಲಾಯಿತು. ಈ ಸಂದರ್ಭದಲ್ಲಿ ಬೆಳಗ್ಗೆಯೇ ವಿವಿಧೆಡೆಗಳಿಂದ ಬರುವ ಬಸ್‌ಗಳನ್ನು ತಡೆಯುವಂತ ಪ್ರಯತ್ನ ಸಹ ಮಾಡಲಾಯಿತು. ಚಿಕ್ಕಬಳ್ಳಾಪುರದಲ್ಲಿ ರೈತರು ಬೆಳಿಗ್ಗೆಯೇ ಪಂಜಿನ ಮೆರವಣಿಗೆ ನಡೆಸಿದರು. ಬಾಗಲಕೋಟ ಜಿಲ್ಲೆಯ ಹುನಗುಂದದಲ್ಲಿ ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆದರು. ಇದರಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸ್ಥಗಿತಗೊಂಡವು. ಕಲಬುರ್ಗಿಯಲ್ಲಿಯೂ ಸಹ ರೈತರು ಬಸ್ ನಿಲ್ದಾಣಕ್ಕೆ ನುಗ್ಗಿ ಬಸ್‌ಗಳನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಕೆಲ ಕಾಲ ಗೊಂದಲ ಉಂಟಾಗಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೆ.೨೭: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲಸೆ.೨೭: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದ ಕಾವೇರಿ ವೃತ್ತದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯುವಂತೆ ಒತ್ತಾಯ ಮಾಡಿದರು.

Girl in a jacket
error: Content is protected !!