ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

Share

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

By ಕೆಂಧೂಳಿ

ಬೆಂಗಳೂರು, ಜ,22-ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ಹಾಗೂ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ಮನ್ನ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು.

ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,‌ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.

Girl in a jacket
error: Content is protected !!