ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ

Share

ವಿಜಯಪುರ ,ಜೂ,03:ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು.

ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದಿಂದ ಬಂದಿದ್ದ ಎನ್.ಎಸ್.ಖೇಡ್ ಅವರು ವಿಜಯಪುರ ಜಿಲ್ಲೆಯ ಮುತ್ಸದ್ದಿ ನಾಯಕ ದಿ.ಬಿ.ಎಂ.ಪಾಟೀಲ್‍ರ ಅನುಯಾಯಿಯಾಗಿ ಯುವ ವಯಸ್ಸಿನಲ್ಲಿಯೇ ರಾಜಕೀಯ ಪವೇಶ ಮಾಡಿದ್ದರು.

1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿ, ಅತ್ಯಂತ ಕಡಿಮೆ ಮತಗಳಿಂದ ಪರಾಭವಗೊಂಡಿದ್ದ ಇವರು ಇಡೀ ರಾಜ್ಯದ ಗಮನ ಸೆಳೆದಿದ್ದರು. ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ ಅವರ ದೀರ್ಘ ಕಾಲ ಒಡನಾಡಿಯಾಗಿದ್ದ ಎನ್.ಎಸ್.ಖೇಡ ಅವರು, 1985-89 ರವರೆಗೆ ಇಂಡಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾಗಿ, ವಿಜಯಪುರದ ಹಿಟ್ನಳ್ಳಿಯಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಕಾರಣರಾಗಿದ್ದರು. ಬಿ.ಎಲ್.ಡಿ.ಇ ಸಂಸ್ಥೆಯ ಆಜೀವ ಸದಸ್ಯರಾಗಿ, ಸಂಸ್ಥೆ ಆಡಳಿತಮಂಡಳಿಯ ಸದಸ್ಯರಾಗಿ, ವೈದ್ಯಕೀಯ ಕಾಲೇಜು ಸ್ಥಾಪನೆಯಲ್ಲಿ ಶ್ರಮವಹಿಸಿದ್ದರು.

ಎನ್.ಎಸ್.ಖೇಡ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು ಸೇರಿದಂತೆ ಅಪಾರ ಬಂಧು-ಬಳಗ ಅಗಲಿರುವ ಇವರ ಅಂತ್ಯಕ್ರಿಯೆ ಸ್ವಗ್ರಾಮ ಸಾವಳಸಂಗದಲ್ಲಿ ಗುರುವಾರ ಸಂಜೆ ಜರುಗಲಿದೆ.

ಕೃಷಿ, ರೈತರು, ನೀರಾವರಿ ಕುರಿತು ಅಪಾರ ಆಸಕ್ತಿ ಹೊಂದಿದ್ದ ಇವರು ಜಲಗಾಂಧಿ ಡಾ.ರಾಜೇಂದ್ರ ಸಿಂಗ್ ಅವರೊಂದಿಗೆ ಅವರ ಸ್ವಯಂಸೇವಾ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ವಿಜಯಪುರದಿಂದ ಸಾವಳಸಂಗದ ತಮ್ಮ ತೋಟಕ್ಕೆ ಪ್ರತಿನಿತ್ಯ ತಪ್ಪದೇ ಹೋಗಿಬರುತ್ತಿದ್ದರು.

ಸಂತಾಪ: ಎನ್.ಎಸ್.ಖೇಡ್ ಅವರ ನಿಧನಕ್ಕೆ ಮಾಜಿ ಪ್ರಧಾನ ಎಚ್.ಡಿ.ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿಂದುಳಿದ ಆಯೋಗಗಳ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ, ವಿಧಾನಪರಿಷತ್ ಸದಸ್ಯರಾದ ಕೊಂಡಜ್ಜಿ ಮೋಹನ, ಸುನೀಲಗೌಡ ಪಾಟೀಲ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Girl in a jacket
error: Content is protected !!