ಮುಂಬೈ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಒಪ್ಪಿಗೆ

Share

ಬೆಂಗಳೂರು,ನ,08:_ಮಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ವೆಂದಿ ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ  ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಲ್ಲಿಸಿತ್ತು. ಈ ಕಡತಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಈ ಹಿನ್ನಲೆಯಲ್ಲಿ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂಬುದಾಗಿ ಕರೆಯಲ್ಪಡಲಿವೆ.

Girl in a jacket
error: Content is protected !!