ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್

Share

ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ
ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು.
ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಹಂಚಿಕೆಯಾದ ನೀರಿನ ಪ್ರಮಾಣದಲ್ಲಿ ಯಾವುದೇ ಕಡಿತವಾಗುವುದಿಲ್ಲ. ಈ ಯೋಜನೆ ಅನುಷ್ಠಾನದಿಂದ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ&ಟಿbsಠಿ; ಉಪಯೋಗವಾಗಲಿದೆ. ಹೆಚ್ಚುವರಿ ಮಳೆ, ಪ್ರವಾಹ ಉಂಟಾದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟೆಯಲ್ಲಿ ನೀರನ್ನು ಸಂಗ್ರಹಿಸಿ, ವಿದ್ಯುತ್ ಉತ್ಪಾದನೆಗೆ ಹಾಗೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಕ್ಕೆ ಕುಡಿಯಲು ಬಳಸಿಕೊಳ್ಳಲಾಗುತ್ತದೆ. ಈ ಯೋಜನೆಗೆ ತಮಿಳುನಾಡು ಅನಗತ್ಯ ಖ್ಯಾತೆ ತೆಗೆಯುವುದು ಸರಿಯಲ್ಲ ಎಂದರು.

Girl in a jacket
error: Content is protected !!