ಬೆಂಗಳೂರು, ಜು,31: ಮೇಕೆ ದಾಟು ಯೋಜನೆಗೆ ಯಾರೆ ಅಡ್ಡಬಂದರೂ ನಿಲ್ಲುವುದಿಲ್ಲ ಯೋಜನೆಯನ್ನು ಮಾಡೀಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಅಣ್ಣಾಮಲೈ ವಿಚಾರ ಕುರಿತು ಪರೋಕ್ಷವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ ಯಾರೇ ವಿರೋಧಿಸಿದರೂ ಡ್ಯಾಂ ನಿರ್ಮಾಣವಾಗಿಯೇ ಆಗುತ್ತದೆ ಎಂದಿದ್ದಾರೆ.
ಕುಡಿಯುವ ನೀರಿನ ಉದ್ದೇಶದಿಂದ ರೂಪಿಸಿರುವ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ. ಯೋಜನೆ ಜಾರಿ ಸಂಬಂಧ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಈ ಮೊದಲೇ ಹೇಳಿದ್ದರು.
ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಈಗಾಗಲೇ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕು ರಾಜ್ಯಕ್ಕಿದೆ. ರಾಜ್ಯದ ಜನರ ಹಿತ ರಕ್ಷಣೆಗಾಗಿ 100ಕ್ಕೆ 100ರಷ್ಟು ಯೋಜನೆ ಜಾರಿಗೊಳಿಸಲಾಗುವುದು.
ರಾಜ್ಯ ಸರ್ಕಾರದ ಈ ಮನವಿಯನ್ನು ನಿಯಮಾನುಸಾರ ಕೇಂದ್ರ ಸರಕಾರ ಪರಿಗಣಿಸಬೇಕು ಎಂದು ಹೇಳಿದರು.
ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಯನ್ನು ನಿಲ್ಲಿಸಲು ರಾಜ್ಯಕ್ಕೆ ಯಾವುದೇ ಸಕಾರಣಗಳಿಲ್ಲ. ಯೋಜನೆ ಜಾರಿಗ ಅಗತ್ಯವಿರುವ ಎಲ್ಲಾಒಪ್ಪಿಗೆಯನ್ನು ಕೇಂದ್ರದಿಂದ ಪಡೆಯಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು. ಎಂದು ಅವರು ತಿಳಿಸಿದರು.