ರಾಜ್ಯದಲ್ಲಿ ಭಾರಿ ಮಳೆ ಸೂಚನೆ- ೭ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Share

ಬೆಂಗಳೂರು,ಮೇ, ೧೫ : ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಆಗಮಿಸುವ ಹಿನ್ನೆಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಇಂದಿನಿಂದ ಮೇ ೧೭ ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿರು ಕಾರಣ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಚಂಡಮಾರುತದ ಪರಿಣಾಮದಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಲಾಶಯಗಳು, ನದಿ ದಂಡೆಗಳ ಪಕ್ಕದಲ್ಲಿರುವ ನಿವಾಸಿಗಳು ಹೆಚ್ಚಿನ ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಅದೇ ರೀತಿ ಇಂದು ಮತ್ತು ಮೇ ೧೬ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ,ಕೊಪ್ಪಳ, ವಿಜಯಪುರ ಹಾಗೂ ಬಾಗಲಕೋಟೆಯ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Girl in a jacket
error: Content is protected !!