ರಾಜ್ಯದಲ್ಲಿ ೩೦೦ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ-ಸುಧಾಕರ್

Share

ಬೆಂಗಳೂರು,ಮೇ,೨೪: ಕಪ್ಪು ಶಿಲೀಂದ್ರ ಸಮಿತಿ ನೀಡಿರುವ ಪ್ರಾಥಮಿಕ ವರದಿಯಲ್ಲಿ ರಜ್ಯದಲ್ಲಿ ೩೦೦ಕ್ಕೂ ಅಧಿಕ ಬ್ಲಾಕ್ ಫಂಗಸ್ ಸೋಂಕಿತರು ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ,ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ ಎಂದರು.
ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‌ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಹಾಗೂ ಕೋವಿಡ್ ನಿಂದ ಗುಣಮುಖರಾದವರಿಗೆ ಇಎನ್ ಟಿ ವೈದ್ಯರು ೩, ೭, ೨೧ನೇ ದಿನ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
೩೦೦ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. ೧೭ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜೊತೆ ಚರ್ಚಿಸಲಾಗಿದೆ ಎಂದರು.
ಇಡೀ ದೇಶದಲ್ಲಿ ವರ್ಷಕ್ಕೆ ೧೦೦-೨೦೦ ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ ೩೦೦ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತಿದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರ ೧ ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

Girl in a jacket
error: Content is protected !!