ರಾಜ್ಯದ ೨೫ ವಿಧಾನರಪಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

Share

ಬೆಂಗಳೂರು,ನ,೦೯:ಕರ್ನಾಟಕ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ರಾಜ್ಯ ಮೇಲ್ಮನೆಯ ೨೫ ಸ್ಥಾನಗಳಿಗೆ ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ ೧೪ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ ೧೬ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ ೨೩ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.
ನವೆಂಬರ್ ೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ ೨೬ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ ೧೦ ಶುಕ್ರವಾರ ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.

Girl in a jacket
error: Content is protected !!