ರಾಜ್ಯಾದ್ಯಂತ 30 ಕಡೆ ಐಟಿ ದಾಳಿ

Share

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ

by- ಕೆಂಧೂಳಿ

ಬೆಂಗಳೂರು, ಫೆ,05- ಆದಾಯ ತೆರಿಗೆ ವಂಚನೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30 ಕಡೆ ಆದಾಯ ತೆರಿಗೆಅಧಿಕಾರಿಗಳು ದಾಳಿ ನಡೆಸಿದ್ದಾರೆ
ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Adavategement

ಉದ್ಯಮಿ, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಮೈಸೂರಿನಲ್ಲಿ ಕಂಟ್ರಾಕ್ಟರ್, ಇಟ್ಟಿಗೆ ಫ್ಯಾಕ್ಟರಿ ವ್ಯವಹಾರ ಮಾಡುತ್ತಿದ್ದ ರಾಮಕೃಷ್ಣ ಎಂಬುವವರ ಮನೆ ಕಚೇರಿ ಮೇಲೆ ಐಟಿ ದಾಳಿಯಾಗಿದೆ. ರಾಮಕೃಷ್ಣ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು ದಾಖಲೆ ಪರಿಶೀಲಿಸುತ್ತಿದ್ದಾರೆ.

Girl in a jacket
error: Content is protected !!