ಬೆಂಗಳೂರು,ಜೂ,೧೦: ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ
ಶುಕ್ರವಾರ ಹೆಚ್‌ಎಎಲ್’ಗೆ ತೆರಳಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮೊದಲಿಗೆ ಹಾಸನಕ್ಕೆ ಭೇಟಿ ನೀಡುವ ಅವರು ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ ೧.೩೦ರ ಸುಮಾರಿಗೆ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ರಸ್ತೆ ಮೂಲಕ ಶಿವಮೊಗ್ಗ ಜಿಲ್ಲೆಗೆ ಶನಿವಾರ ಬೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಮುಂದಿನ ಬುಧವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದು, ಸರ್ಕಾರ ಮತ್ತು ಪಕ್ಷದಲ್ಲಿ ತಲೆದೋರಿರುವ ಗೊಂದಲ ನಿವಾರಣೆಗೆ ಕಸರತ್ತು ನಡೆಸುವ ನಿರೀಕ್ಷೆಯಿದೆ. ಈ ವೇಳೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿರುವುದು ಅತ್ಯಂತ ಮುಖ್ಯವಾಗಿದೆ.
ಶನಿವಾರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
Share