ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ -ಶಾಲಾಕಾಲೇಜುಗಳಿಗೆ ಇಂದು ರಜೆ

Share

ಶಿವಮೊಗ್ಗ, ಫೆ ೨೧: ನಿನ್ನೆ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಹಿಂದೂ ಕಾರ್ಯಕರ್ತನ ಹರ್ಷ ಎಂಬಾತನ ಮೇಲೆ ಎರಗಿ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲೇ ಆಗಿದೆ.
ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಹಿಜಾಬ್ ವಿವಾಧದ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಎಷ್ಟೇ ತಡೆದರೂ ಕಲ್ಲೆಸೆಯುವುದನ್ನು ಬಿಡಲಿಲ್ಲ. ಕಣ್ಣಿಗೆ ಕಂಡ ವಾಹನಗಳಿಗೆ ಬೆಂಕಿ ಹಚ್ಚಿದರು. ಇದಕ್ಕೆಲ್ಲಾ ಕಾರಣ ನಡುರಸ್ತೆಯಲ್ಲೇ ನೆತ್ತರೋಕುಳಿ ಹರಿದಿರುವುದು. ದುಷ್ಕರ್ಮಿಗಳು ಮನಬಂದಂತೆ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲಿ ಭಾನುವಾರ ರಾತ್ರಿ ೩೦ರ ಸಮಯಕ್ಕೆ ನೆತ್ತರೋಕುಳಿ ಹರಿದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಕಾರಿನಲ್ಲಿ ಬಂದಿದ್ದ ೪ರಿಂದ ೬ ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದನು.

ಕಲ್ಲುತೂರಾಟ, ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಣ
ಶಿವಮೊಗ್ಗದ ಸಿಗೇಹಟ್ಟಿ ಬಡಾವಣೆ ನಿವಾಸಿಯಾಗಿದ್ದ ಹರ್ಷ, ಐದು ವರ್ಷಗಳಿಂದ ಭಜರಂಗ ದಳದ ಸಕ್ರಿಯ ಕಾರ್ಯಕರ್ತನಾಗಿದ್ದ. ಈ ಹಿಂದೆ ಎರಡು ಬಾರಿ ಈತನ ಮೇಲೆ ಅಟ್ಯಾಕ್ ನಡೆದಿತ್ತು. ಆದರೆ ಭಾನುವಾರ ಸ್ಕೆಚ್ ಹಾಕಿದ್ದ ದುಷ್ಕರ್ಮಿಗಳು, ಹರ್ಷನ ಮೇಲೆ ಭೀಕರ ದಾಳಿ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮಾರಕಾಸ್ತ್ರ ಬೀಸಿ ಪರಾರಿ ಆಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸೀಗೆಹಟ್ಟಿ ಬಡಾವಣೆ ಮತ್ತು ಅಕ್ಕಪಕ್ಕದ ಬಡಾವಣೆ ನಿವಾಸಿಗಳು ಜಮಾಯಿಸಿದರು. ರವಿವರ್ಮ ಬೀದಿ, ಕಲರ್ ಪೇಟೆ, ಶಾಮರಾವ್ ಬೀದಿ ಸೀಗೆಹಟ್ಟಿ ಸೇರಿ ವಿವಿಧ ಬಡಾವಣೆಯಲ್ಲಿ ೨ ಉದ್ರಿಕ್ತ ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೀತು. ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದರು.
ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಭಜರಂಗ ದಳ ಕಾರ್ಯಕರ್ತನ ಹತ್ಯೆ ಸುದ್ದಿ ಮಲೆನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿತು. ಕೂಡಲೇ ಸ್ಥಳಕ್ಕೆ ಬಂದ ಎಸ್?ಪಿ ಲಕ್ಷ್ಮಿಪ್ರಸಾದ್ ಮತ್ತು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಪರಿಶೀಲನೆ ನಡೆಸಿದರು. ಸೂಕ್ಷ್ಮಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದೇ ವೇಳೆ, ಮಾತಾಡಿದ ಡಿಸಿ ಡಾ. ಸೆಲ್ವಮಣಿ, ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಅಂತಾ ಮನವಿ ಮಾಡಿದ್ದಾರೆ.
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅಲರ್ಟ್ ಆಗಿದ್ದಾರೆ. ಉದ್ವಿಗ್ನಗೊಂಡ ಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮತ್ತೊಂದೆಡೆ, ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಈಗಾಗಲೇ ಹಿಜಾಬ್ ವಿವಾದದ ಮೂಲಕ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಈ ನಡುವೆ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಹತ್ಯೆಯ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Girl in a jacket
error: Content is protected !!