ಸಿಇಟಿ ಫಲಿತಾಂಶ ಪ್ರಕರಟ-ಇಂಜಿನಿಯರಿಂಗ್‌ನಲ್ಲಿ ಭವೇಶ್ ಜಯಂತಿ ಮೊದಲ ರ‍್ಯಾಂಕ್

Share

ಬೆಂಗಳೂರು,ಮೇ,೨೪-ವಿವಿಧ ವೃತ್ತಿ ಪರಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕ ಸರ್ಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಇಂದು ಉನ್ನತ ಸಚಿವ ಡಾ.ಎಂ.ಸಿ. ಸುಧಾಕರ್ ಪ್ರಕಟಿಸಿದರು. ಕೆಇಟಿ ಅಧಿಕೃತವೆಬ್‌ಸೈಟ್‌ಗಳಾದ
ಛಿeಣoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಞಚಿಡಿಡಿesuಟಣs.ಟಿiಛಿ.iಟಿ ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ ೧೬, ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.
ಸಿಇಟಿ ಪರೀಕ್ಷೆಗೆ ೩.೩೦ ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ ೩,೧೧,೦೦೦ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.

ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ್ಯಾಂಕ್ ಗಳಿಸಿದ್ದಾರೆ. ದಿನೇಶ್ ಗೋಮತಿ ಶಂಕರ್ ಅರುಣಾಚಲಂ ೩ನೇ ರ್ಯಾಂಕ್ ಗಳಿಸಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ.

ಬಿಎನ್‌ವೈಎಸ್, ಪಶುವೈದ್ಯಕೀಯ ಮತ್ತು ನರ್ಸಿಂಗ್ ವಿಭಾಗಗಳಲ್ಲಿ ಹರಿಶ್‌ರಾಜ್ ಡಿವಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಫಲಿತಾಂಶದ ಲಿಂಕ್ ನ್ನು ಮಧ್ಯಾಹ್ನ ೨ ಗಂಟೆಗೆ ಸಕ್ರಿಯಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

Girl in a jacket
error: Content is protected !!