ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- 8 ಮಂದಿ ಬಂಧನ

Share

ಮಂಗಳೂರು, ಮೇ,03-ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.

ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಸಫ್ವಾನ್ ​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಮಾಹಿತಿ ನೀಡಿದರು.

ಸುಹಾಸ್ ಶೆಟ್ಟಿ ಕೊಲೆ ಮಾಡಲು ಸಫ್ವಾನ್​ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದನು. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದು, ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅವರು ವಿವರಿಸಿದರು.

Girl in a jacket
error: Content is protected !!