ಸ್ವಚ್ಛವಾಹಿನಿ ಚಾಲಕಿಯರ ವೇತನ ಹಾಗೂ ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್‌ ಖರ್ಗೆ

Share

ಬೆಂಗಳೂರು, ಮೇ,26-ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ʼಸ್ವಚ್ಛ ವಾಹಿನಿʼ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 3469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು.

ಸಭೆಯಲ್ಲಿ ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Girl in a jacket
error: Content is protected !!