ಹುಬ್ಬಳ್ಳಿ ಮೃ,22: ವಿಸ್ತರಣೆ ಯಾಗಿರುವ ಲಾಕ್ಡೌನ್ ನ್ನು ಪರಿಣಾಮಕಾರಿ ಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರು- ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಲಾಕ್ಡೌನ್ ಪರಿಣಾಮಕಾರಿಯಾಗಿ ಜಾರಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.