ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು

Share

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು

 by-ಕೆಂಧೂಳಿ

ರಾಯ್ಪುರ,ಫೆ,೦೯-ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ೧೨ ನಕ್ಸಲರು ಸಾವನ್ನಪ್ಪಿದ್ದುಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಡೆದಿದ್ದು ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ ೧೨ ನಕ್ಸಲರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಎನ್‌ಕೌಂಟರ್‌ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಎನ್‌ಕೌಂಟರ್ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Girl in a jacket
error: Content is protected !!