ಎರಡು ವರ್ಷ ಸಾಧನೆ;ಸಚಿವರ ಜೊತೆ ಮೋದಿ ವೈಯಕ್ತಿಕ ಸಭೆ?

Share

ನವದೆಹಲಿ,ಜೂ,೧೧:ಕೇಂದ್ರ ಸರ್ಕಾರದ ಎರಡು ವರ್ಷದಲ್ಲಿ ಆಗಿರುವ ಕೆಲಸ ಕುರಿತಂತೆ ಪ್ರಗತಿ ಪರಿಶೀಲನೆ ಮಾಡುತ್ತಿರುವ ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಜೊತೆ ವೈಯಕ್ತಿಕವಾಗಿ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ
ಈ ವೇಳೆ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಮುಂದಿನ ದಿನಗಳ ಸರ್ಕಾರದ ಯೋಜನೆಗಳ ಕುರಿತಂತೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎನ್ನಲಾಗಿದೆ.
ದೆಹಲಿಯ ೭ ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಈಗಾಗಲೇ ಇಂತಹ ಅಂತಹ ಮೂರು ಸಭೆಗಳನ್ನು ನಡೆಸಲಾಗಿದೆ. ಈ ಸಭೆಗಳಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬಹುತೇಕ ಎಲ್ಲ ಸಭೆಗಳು ಐದು ಗಂಟೆಗಳಿಗಿಂತ ಹೆಚ್ಚು ಕಾಲ ನಡೆದಿದ್ದು, ಕೋವಿಡ್-೧೯ ರ ಎರಡನೇ ಅಲೆ ಆರಂಭವಾದ ನಂತರ ಈ ಸಭೆಗಳನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ವರೆಗೂ ಗ್ರಾಮೀಣಾಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಬುಡಕಟ್ಟು ವ್ಯವಹಾರಗಳು, ನಗರಾಭಿವೃದ್ಧಿ, ಸಂಸ್ಕೃತಿ, ಅಂಕಿ ಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ, ನಾಗರಿಕ ವಿಮಾನಯಾನ, ರೈಲ್ವೆ, ಜಲ್ ಶಕ್ತಿ, ಪೆಟ್ರೋಲಿಯಂ, ಸ್ಟೀಲ್ ಮತ್ತು ಪರಿಸರ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವರು ಮತ್ತು ರಾಜ್ಯ ಸಚಿವರ ಜತೆ ಮೋದಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕೆಲದಿನಗಳ ಕಾಲ ಈ ಸಭೆಗಳು ಮುಂದುವರಿಯುವ ಸಾಧ್ಯತೆ ಇದ್ದು ಮತ್ತಷ್ಟು ಸಚಿವರ ಜೊತೆ ಸಭೆ ನಡೆಲಿದೆ ಎಂದು ಎಂದು ಮೂಲಗಳು ತಿಳಿಸಿವೆ.
ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಕ್ಯಾಬಿನೆಟ್ ಸಭೆ ಸಾಮಾನ್ಯವಾಗಿ ವಾರಕ್ಕೊಮ್ಮೆ ಮತ್ತು ಮಂತ್ರಿಗಳ ಕೌನ್ಸಿಲ್ ತಿಂಗಳಿಗೊಮ್ಮೆ ನಡೆಯುತ್ತದೆ. ಪ್ರತಿ ಬುಧವಾರ ವರ್ಚುವಲ್ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು, ಕೇಂದ್ರ ಸಚಿವರೊಂದಿಗಿನ ಈ ಸಭೆಗಳಿಗೆ ಮುಂಚಿತವಾಗಿ ಮೋದಿಯವರು ಬಿಜೆಪಿಯ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ನಡೆಸಿದರು. ಎರಡೂ ಸಭೆಗಳು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ನಡೆದಿವೆ. ಪಕ್ಷದ ಪದಾಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ ಸಭೆಗಳಲ್ಲಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

Girl in a jacket
error: Content is protected !!