ಕಚ್ಚಾತೈಲ ಬೆಲೆ ಕುಸಿದರೂ ಪರಿಷ್ಕರಣೆಯಾಗದ ಇಂಧನ ಬೆಲೆ..!

Share

ನವದೆಹಲಿ, ಆ, 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 23 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 9ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆಗೆ 101.84ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.87ರು ಆಗಿದೆ.

Girl in a jacket
error: Content is protected !!