ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

Share

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

by-ಕೆಂಧೂಳಿ

ನವದೆಹಲಿ, ಫೆ,19-ಮೊದಲಬಾರಿ ಗೆದ್ದ ರೇಖಾ ಗುಪ್ತ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ. ಮಾತ್ರವಲ್ಲ ಈ ಮಹಿಳೆ ಇದೇ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವುದು ವಿಶೇಷ.

ನಾಳೆ ಸಿಎಂ ಆಗಿ ಪ್ರಮಾಣವಚನ

ರೇಖಾ ಗುಪ್ತಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಫೆಬ್ರವರಿ 20 ರಂದು ಮಧ್ಯಾಹ್ನ 12.35 ಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಘೋಷಣೆ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಸಿಎಂ ಹೆಸರನ್ನು ಪಕ್ಷದ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧಂಕರ್ ಮುಂದೆ ಘೋಷಿಸಿದ್ದಾರೆ.

ರೇಖಾ ಗುಪ್ತಾ ಯಾರು?

ರೇಖಾ ಗುಪ್ತಾ ಅವರು ಜುಲೈ 19, 1974ರಲ್ಲಿ ಹರಿಯಾಣದಲ್ಲಿ ಜನಿಸುತ್ತಾರೆ. ಬಳಿಕ ಅವರು 1996-97ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. ನಂತರ 2007 ರಲ್ಲಿ ಉತ್ತರ ಪಿತಂಪುರ (ವಾರ್ಡ್ 54) ರಿಂದ ದೆಹಲಿ ಕೌನ್ಸಿಲರ್ ಚುನಾವಣೆಗೆ ಆಯ್ಕೆಯಾಗಿದ್ದರು, ಬಳಿಕ 2013 ರಲ್ಲಿ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಮರು ಆಯ್ಕೆಯಾಗಿದ್ದು ವಿಶೇಷ .

ಎಎಪಿ ಅಭ್ಯರ್ಥಿ ವಿರುದ್ಧ ಭಾರೀ ಅಂತರದ ಗೆಲುವು

ಸದ್ಯ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ಕ್ಷೇತ್ರದಿಂದ ವಿಧಾನ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 2025 ರಲ್ಲಿ ನಡೆದ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಬಂದಾನ ಕುಮಾರಿ ಅವರ ವಿರುದ್ಧ 29,565 ಮತಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಮಾತ್ರವಲ್ಲ ಅವರು ಇದಕ್ಕೂ ಮೊದಲು ದೆಹಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆಯಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಸದ್ಯ ಅವರು ನಾಳೆ (ಫೆಬ್ರವರಿ 20)ರಂದು ನಡೆಯುವ ಪ್ರಮಾಣ ವಚನ ಸಮಾರಂಭದಲ್ಲಿ ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ಹಾಗೂ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕೂ ಮೊದಲು ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಬಳಿಕ ದೆಹಲಿಯ ಮುಖ್ಯಮಂತ್ರಿ ಗದ್ದುಗೆ ಏರಿದ 4ನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Girl in a jacket
error: Content is protected !!