ನವದೆಹಲಿ,ಮೇ,೨೫: ಕಳೆದ ೨೪ ಗಂಟೆಯಲ್ಲಿ ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು ೧,೯೬,೪೨೭ ಜನರಲ್ಲಿ ಸೋಂಕು ದೃಡಪಟ್ಟಿದ್ದು,೩,೫೧೧ ಜನ ಸಾವನ್ನಪ್ಪಿದ್ದಾರೆ.
ಕಳೆದ ಹಲವು ದಿನಗಳಿಂದ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗಿತ್ತು ಆದರೆ ಕಳೆದ ೨೪ ಗಂಟೆಯಲ್ಲಿ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿರುವುದು ಒಂದಿಷ್ಟು ನೆಮ್ಮದಿ ತಂದಿದೆ.
ಹಲವು ದಿನಗಳಿಂದ ೪ ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ ೨ ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, ೨ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ೨,೭೮,೭೧೯ಕ್ಕೆ ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ ೨,೫೨,೨೮,೯೯೬ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೨೫,೮೬,೭೮೨ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ ೨೪ ಗಂಟೆಗಳಲ್ಲಿ ೩,೨೬,೮೫೦ ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ ೨,೪೦,೫೪,೮೬೧ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ೨೦,೫೮,೧೧೨ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ೩೩,೨೫,೯೪,೧೭೬ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ ೧೬ ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.೧ರಿಂದ ೧೮-೪೫ ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ ೧೯,೮೫,೩೮,೯೯೯ ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಕೊರೊನಾ ಇಳಿಕೆ,೧,೯೬ ಲಕ್ಷ ಹೊಸ ಪ್ರಕರಣ,೩,೫೧೧ ಸಾವು
Share