ಕೋಲ್ಕತ್ತ,ಮೇ29: ಪಶ್ಚಿಮ ಬಂಗಾಳದ ಕಲ್ಯಾಣ ಮತ್ತು ಅಮೂಲಾಗ್ರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿಯವರು ಕಾಲು ಹಿಡಿಯಲೂ ಸಿದ್ದ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಆದರೆ,ಮೋದಿ ಮತ್ತು ಅಮಿತ್ ಉದ್ದೇಶ ಪೂರ್ವಕವಾಗಿ ತೊಂದರೆ ಕೊಡುತ್ತಿದ್ದಾರೆ..ನನಗೆ ನನ್ನ ರಾಜ್ಯದ ಅಭಿವೃದ್ಧಿ ಗೆ ಏನುಬೇಕಾದರೂ ಮಾಡಬಲ್ಲೆ ಎಂದಿದ್ದಾರೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ಹಿಂಪಡೆಯಬೇಕು. ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಲು ಅವರಿಗೆ ಅನುವು ಮಾಡಿಕೊಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನ ಸರ್ಕಾರಕ್ಕೆ ತೊಂದರೆ ಉಂಟುಮಾಡಲು ಯತ್ನಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿನ ಸೋಲನ್ನು ಅರಗಿಸಿಕೊಳ್ಳುವುದು ಅವರಿಗೆ ಇನ್ನೂ ಸಾಧ್ಯವಾಗಿಲ್ಲ’ ಎಂದು ಮಮತಾ ಹೇಳಿದ್ದಾರೆ.
ಮೋದಿ,ಶಾಗೆ, ಬಂಗಾಳದಲ್ಲಿ ಬಿಜೆಪಿಯ ಸೋಲು ಅರಗಿಸಿಕೊಳ್ಳುವುದಕ್ಕಾಗದೆ ಸಮಸ್ಯೆಗಳನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಯವರು ಮಾಡಿದ ತಪ್ಪೇನು ಎಂದು ಮಮತಾ ಪ್ರಶ್ನಿಸಿದ್ದಾರೆ.
‘ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖಹೇಳಿದ್ದಾರೆ.
ದರ್ಶಿಯನ್ನು ಕರೆಸಿಕೊಂಡಿರುವುದು ಕೇಂದ್ರವು ರಾಜಕೀಯ ದ್ವೇಷದಲ್ಲಿ ತೊಡಗಿದೆ ಎಂಬುದನ್ನು ತೋರಿಸುತ್ತದೆ’ ಎಂದು ಅವರು ಹೇಳಿದ್ದಾರೆ.
ಪ್ರಧಾನಿಯವರ ಸಭೆಗೆ ಗೈರಾದ ಬಗ್ಗೆ ಕೇಳಿಬಂದಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅದು ಪ್ರಧಾನಿ ಮತ್ತು ಮುಖ್ಯಮಂತ್ರಿ ನಡುವೆ ನಡೆಯಬೇಕಿದ್ದ ಸಭೆ. ಆ ಸಭೆಗೆ ಬಿಜೆಪಿ ನಾಯಕರನ್ನು ಆಹ್ವಾನಿಸಿದ್ದೇಕೆ’ ಎಂದು ಪ್ರಶ್ನಿಸಿದ್ದಾರೆ.
ಇಂಥದ್ದೇ ಸಭೆಗಳಿಗೆ ಗುಜರಾತ್ ಮತ್ತು ಒಡಿಶಾದಲ್ಲಿ ಪ್ರತಿಪಕ್ಷ ನಾಯಕರನ್ನು ಆಹ್ವಾನಿಸಿಲ್ಲ ಎಂದೂ ಅವರು ಹೇಳಿದ್ದಾರೆ.