ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ
ಕೆಂಧೂಳಿ
ನವದೆಹಲಿ, ಫೆ.೨೭- ಹಲವು ವಿರೋಧಗಳ ನಡುವೆಯೂ ಜಂಟಿ ಸದನ ಸಮಿತಿಯು ಸೂಚಿಸಿದ್ದ ೨೩ ತಿದ್ದುಪಡಿಗಳ ಪೈಕಿ೧೪ ವಕ್ಫ್ ಮಸೂದೆ ತಿದ್ದುಪಡಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.
ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಂಟಿ ಸದನ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಆದರೆ, ಮಾರ್ಚ್ ೧೦ರಂದು ಸಂಸತ್ ಕಲಾಪ ಪುನಾರಂಭಗೊಂಡಾಗ ಈ ತಿದ್ದುಪಡಿ ಮಸೂದೆಯನ್ನು ಸದನದ ಮುಂದೆ ಮಂಡಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.
ಫೆ.೧೩ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ ವರದಿ ಆಧರಿಸಿ ಫೆ.೧೯ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ. ಸಂಸತ್ತಿನಲ್ಲಿ ೨೦೨೫ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು.
ಈ ವೇಳೆ ವಿಪಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು. ಆದ್ರೆ ಕೇಂದ್ರವು ಈ ಆರೋಪವನ್ನು ನಿರಾಕರಿಸಿದೆ.
ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಅಧಿವೇಶನದ ದ್ವಿತೀಯಾರ್ಧದಲ್ಲಿ ಸರ್ಕಾರ ಅನುಮೋದಿಸಿತ್ತು. ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಮೂಲಕ ಮಾ. ೧೦ರಂದು ಪ್ರಾರಂಭವಾಗಲಿರುವ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು ೪೪ ತಿದ್ದುಪಡಿಗಳಿಗೆ ಸೂಚಿಸಿದ್ದರು.
ಈ ಪೈಕಿ ಬಿಜೆಪಿ ನೇತೃತ್ವದ ಎನ್ಡಿಎ ಸದಸ್ಯರು ಪ್ರಸ್ತಾಪಿಸಿದ ೧೪ ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿದೆ. ಫೆ. ೧೩ರಂದು ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಲೋಕಸಭೆಗೆ ಸಲ್ಲಿಸಿತ್ತು. ಹೀಗಿದ್ದೂ, ಲೋಕಸಭೆಗೆ ಸಲ್ಲಿಸಲಾಗಿರುವ ವರದಿಯಲ್ಲಿ ನಮ್ಮ ಭಿನ್ನಮತದ ಟಿಪ್ಪಣಿಗಳ ಅಧ್ಯಾಯವನ್ನು ತೆಗೆದು ಹಾಕಲಾಗಿದೆ ಎಂದು ಜಂಟಿ ಸದನ ಸಮಿತಿಯಲ್ಲಿದ್ದ ವಿಪಕ್ಷಗಳ ಸಂಸದರು