ನವದೆಹಲಿ, ಆ, 17: ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಮುಖ್ಯವಾಗಿ ತೆಲಂಗಾಣದಲ್ಲಿ ಅಧಿಕ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ, ಅಂದರೆ ಆಗಸ್ಟ್ ೨೦ರವರೆಗೂ ಅಧಿಕ ಮಳೆಯಾಗುವುದು ಎಂದು ತಿಳಿಸಿದೆ. ತೆಲಂಗಾಣ ಮಧ್ಯ, ಉತ್ತರ ಹಾಗೂ ಈಶಾನ್ಯ ಭಾಗಗಳಲ್ಲಿ ಸಾಧಾರಣದಿಂದ ಅಧಿಕ ಮಟ್ಟದ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಒಡಿಶಾದ ಕರಾವಳಿ ಹಾಗೂ ಆಂಧ್ರಪ್ರದೇಶದ ಉತ್ತರ ಭಾಗದಲ್ಲಿ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಚಂಡಮಾರುತದ ಪ್ರಭಾವ ಮೂರು ದಿನ ಮುಂದುವರೆಯುವುದಾಗಿ ಹೈದರಾಬಾದ್‌ನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕಿ ಡಾ. ಕೆ. ನಾಗರತ್ನ ತಿಳಿಸಿದ್ದಾರೆ.
ಈ ಚಂಡಮಾರುತದ ಪ್ರಭಾವದಿಂದಾಗಿ ತೆಲಂಗಾಣದ ಹಲವು ಭಾಗಗಳಲ್ಲಿ ಅಧಿಕ ಮಳೆಯಾಗಲಿದೆ. ಮುಂದಿನ ೨೪ ಗಂಟೆಗಳಲ್ಲಿ ಉತ್ತರ, ವಾಯವ್ಯ, ಮಧ್ಯ ಭಾಗಗಳಲ್ಲಿ ಭಾರೀ ಮಳೆಯಾಗುವುದಾಗಿ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ ೧೮ರಂದು ಹೈದರಾಬಾದ್‌ನಲ್ಲಿ ಕೂಡ ಸಾಧಾರಣದಿಂದ ಅಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳ ವಿರಾಮದ ನಂತರ ನೈಋತ್ಯ ಮುಂಗಾರು ಮತ್ತೆ ಚುರುಕುಪಡೆಯುತ್ತಿದೆ. ದಕ್ಷಿಣ ಭಾರತದಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
೫ ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ಮುಂದಿನ ೫ ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ಮುಂದಿನ ೨೪ ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಗೋಚರಿಸಲಿದೆ ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. “ಮತ್ತೆ ಮುಂಗಾರು ಚುರುಕು ಪಡೆದಿದ್ದು, ಭಾರತದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ.