ನಾರದ ವರ್ಗಾವಣೆ ಪ್ರಕರಣ; ಮಮತಾ ಬ್ಯಾನರ್ಜಿಯನ್ನು ಪ್ರತಿವಾದಿ ಮಾಡಿದ ಸಿಬಿಐ

Share

ಕೋಲ್ಕತಾ,ಮೇ೧೯: ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲಾಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಆಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಬುಧವಾರ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿ ಅವರು ತಮ್ಮ ಜಾಮೀನಿಗೆ ನೀಡಿರುವ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸರುವ ಅರ್ಜಿಯನ್ನು ಇದೇ ನ್ಯಾಯಪೀಠ ವಿಚಾರಣೆ ನಡೆಸಲಿದೆ.
ಬ್ಯಾನರ್ಜಿ ಮತ್ತು ಘಟಕ್ ಜೊತೆಗೆ, ತನಿಖಾ ಸಂಸ್ಥೆ ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ವಕೀಲ ಕಲ್ಯಾಣ್ ಬ್ಯಾನರ್ಜಿಯನ್ನು ಹೈಕೋರ್ಟ್ ಗೆ ಸಿಬಿಐ ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Girl in a jacket
error: Content is protected !!