ತೃತೀಯ ರಂಗ ರಚನೆಗೆ ಪುಷ್ಟಿ ನೀಡಿದ ಕಿಶೋರ್ ,ಶರದ್ ಪವಾರ್ ಮಾತುಕತೆ

Share

ಬಿಜೆಪಿಯೇತರ ತೃತೀಯ ರಂಗ ಉದಯವಾಗಲಿದೆ ಎಂಬ ಉಹಾಪೋಗಳ ಮಧ್ಯೆ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತದೆ

ನವದೆಹಲಿ,ಜೂ,21: ಬಿಜೆಪಿಯೇತರ ತೃತೀಯ ರಂಗ  ರಚನೆಯಾಗುವ ಲಕ್ಷಣಗಳು ಇತ್ತೀಚಗೆ ಬಲವಾಗಿ ಗೋಚರಿಸುತ್ತವೆ.
ಇದಕ್ಕೆ ಪುಷ್ಟಿ ನೀಡುವಂತೆ ರಸಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಎನ್ ಸಿಪಿ ಮುಖ್ಯಸ್ಥ ಶರದ್ ಪವರ್ ಜತೆ ಮಾತುಕತೆ ನಡೆಸಿರುವುದು ಮತ್ತಷ್ಟು ಊಹಾಪೋಹಗಳು ಎದ್ದಿವೆ.

ಶರದ್ ಪವಾರ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಈ ಇಬ್ಬರು ಚರ್ಚೆ ನಡೆಸಿದ್ದಾರೆ. ಇನ್ನು ಕಳೆದ ಎರಡು ವಾರದಲ್ಲಿ ಇದು ಎರಡನೇ ಭೇಟಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಸಿಪಿಯ ಸಾಮಾನ್ಯ ಸಭೆಗೂ ಒಂದು ದಿನ ಮೊದಲು ಪ್ರಶಾಂತ್ ಕಿಶೋರ್ ಮತ್ತು ಪವಾರ್ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಶಾಂತ್ ಕಿಶೋರ್ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೂ ಮುನ್ನ ಜೂನ್ 11ರಂದು ಪವಾರ್ ಅವರನ್ನು ಭೇಟಿ ಮಾಡಲಾಗಿತ್ತು. ಇದು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.

ಮೂಲಗಳ ಪ್ರಕಾರ, ಮಾಜಿ ಹಣಕಾಸು ಸಚಿವ ಪ್ರಸ್ತುತ ಟಿಎಂಸಿ ಮುಖಂಡ ಯಶ್ವಂತ್ ಸಿನ್ಹಾ, ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ನಾಯಕ ಮನೋಜ್ ಝಾ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ಮುಖಂಡ ಸಂಜಯ್ ಸಿಂಗ್ ಕೂಡ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

2014ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಪರ ಕೆಲಸ ಮಾಡಿದ್ದ ಕಿಶೋರ್ ನಂತರ ಎನ್ ಡಿಎ ವಿರೋಧಿ ಪಕ್ಷಗಳಿಗೆ ಚುನಾವಣೆ ತಂತ್ರಗಾರರಾಗಿ ಕೆಲಸ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪರ ಚುನಾವಣಾ ಕಾರ್ಯತಂತ್ರವನ್ನು ರೂಪಿಸಿದ್ದರು. ಇನ್ನು 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮತ್ತು ಆರ್‌ಜೆಡಿ ಮೈತ್ರಿಕೂಟದ ಚುನಾವಣಾ ತಂತ್ರಗಾರರಾಗಿದ್ದರು.

Girl in a jacket
error: Content is protected !!