ನ ಕಲಿ ಟಿಆರ್‌ಪಿ ಹಗರಣ: ಅರ್ನಬ್ ಆರೋಪಿ

Share

ಮುಂಬೈಜೂ,೨೨: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಇಂಟೆಲಿಜೆನ್ಸ್ ಯುನಿಟ್ (ಸಿಐಯು) ಈ ಚಾರ್ಜ್‌ಶೀಟನ್ನು ಸಲ್ಲಿಸಿದೆ.ಚಾರ್ಜ್‌ಶೀಟ್‌ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್ ಗೋಸ್ವಾಮಿ ಹಾಗೂ ಎಆರ್‌ಜಿ ಔಟ್‌ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ ವಕೀಲರು ತಿಳಿಸಿದ್ದಾರೆನಕಲಿ ಟಿಆರ್‌ಪಿ ಹಗರಣ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂತು. ಕೆಲವು ಚಾನೆಲ್‌ಗಳು ಟಿಆರ್‌ಪಿ ಮಾಹಿತಿಯನ್ನು ತಿರುಚಿವೆ ಎಂದು ಆರೋಪಿಸಿದ್ದ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಿಎಆರ್‌ಸಿ), ಹನ್ಸ ರಿಸರ್ಚ್ ಗ್ರೂಪ್ (ಎಚ್‌ಆರ್‌ಜಿ) ಮೂಲಕ ದೂರು ಸಲ್ಲಿಸಿತ್ತು

Girl in a jacket
error: Content is protected !!