ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ:  ಶಿವಾನಂದ ಪಾಟೀಲ

Share

ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ:  ಶಿವಾನಂದ ಪಾಟೀಲ

by-ಕೆಂಧೂಳಿ

ಬೆಂಗಳೂರು,ಮಾ,19– ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ 7,550 ರೂ. ಬೆಲೆ ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ 450 ರೂ. ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬಿಲ್ನಲ್ಲಿ ಸೇರ್ಪಡೆಯಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಇದನ್ನು ಸರಿಪಡಿಸಲಾಗಿದೆ. ರೈತರಿಗೆ ಪ್ರತಿ ಕ್ವಿಂಟಲ್ಗೆ ರೂ 8,000 ಪಾವತಿ ಮಾಡಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Girl in a jacket
error: Content is protected !!