88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಕ್ ಆಯ್ಕೆ

Share

ಬಳ್ಳಾರಿ,ಜೂ,29- ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಿ
ಘೋಷಿಸಲಾಗಿದೆ.
ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಂಡಿದ್ದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ
ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.
ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.

Girl in a jacket
error: Content is protected !!