ಬೆಂಗಳೂರು,ಮೇ,26-ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನಟ ಮಡೆನೂರು ಮನುಗೆ 14ದಿನಗಳ ಕಾಲ ನ್ಯಾಯಂಗ ಬಂಧನಕ್ಕೊಳಪಡಿಸಿ 3 ನೇ ಎಸಿಎಂಎಂ ನ್ಯಾಯಾಲಯ ಆದೇಶಿದೆ.
ಮನು ವಿರುದ್ದ ಸಹಕಲಾವಿದೆ ಅತ್ಯಾಚಾರ ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು.
ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.